PDO New Recruitment Notification Details
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಅತಿ ಶೀಘ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯ ಹಣಕಾಸು ಇಲಾಖೆ ಅನುಮೋದನೆಯನ್ನು ನೀಡಲಾಗಿದ್ದು ಅತಿ ಶೀಘ್ರದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಆಗಲಿದೆ.
![]() |
RDPR Recruitment |
ಯಾವ ಇಲಾಖೆಯಿಂದ ಅಧಿಸೂಚನೆ ?
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯಲ್ಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಪಂಚಾಯತ್ ಗ್ರೇಡ್ 2 ಕಾರ್ಯದರ್ಶಿ ಒಟ್ಟು 733 ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ KPSC ಯಿಂದ ನೇಮಕಾತಿ ಅಧಿಸೂಚನೆ ಆಗಲಿದೆ.
ಹುದ್ದೆಗಳ ಸಂಖ್ಯೆ ಎಷ್ಟು ?
RDPR ಇಲಾಖೆಯಲ್ಲಿರುವ PDO ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಹಾಗೂ ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2, ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸೇರಿದಂತೆ 733ಕ್ಕೂ ಅಧಿಕ ಹುದ್ದೆಗಳಿಗೆ ಅತಿ ಶೀಘ್ರದಲ್ಲಿ ನೋಟಿಫಿಕೇಶನ್ ಆಗಲಿದೆ. ಇದರಲ್ಲಿ ಸುಮಾರು 300ಕ್ಕೂ ಅಧಿಕ ಹುದ್ದೆಗಳು ಪಿಡಿಒ ಆಗಿರಲಿವೆ.
ವಿದ್ಯಾರ್ಹತೆ ಏನು ?
ಪಂಚಾಯತ್ ಅಭಿವೃದ್ಧಿ ಅಧಿಕಾರಿ PDO : ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ
ದ್ವಿತೀಯ ದರ್ಜೆ ಲೆಕ್ಕ ಸಹಾಯಕರು : ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.
ಯಾವಾಗ ಅಧಿಸೂಚನೆ ಆಗಲಿದೆ ?
ಪಂಚಾಯತ್ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಧಿಸೂಚನೆಯನ್ನು ಕೈಗೊಳ್ಳಲು ಈಗಾಗಲೇ ಹಣಕಾಸು ಇಲಾಖೆ ಸಹಮತಿ ಸೂಚನೆ ನೀಡಲಾಗಿದೆ ಹಾಗೂ ನೇಮಕಾತಿ ಅಧಿಸೂಚನೆ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ KPSC ಗೆ ಪ್ರಸ್ತಾವನೆ ನೀಡಲಾಗಿದ್ದು ನವೆಂಬರ್ ವಾರಂತ್ಯದಲ್ಲಿ ಅಥವಾ ಡಿಸೆಂಬರ್ ಮೊದಲನೇ ವಾರ ಅಧಿಸೂಚನೆ ಆಗಲಿದೆ ಎಂಬುವುದನ್ನು RDPR ಇಲಾಖೆ ಸಚಿವರು ತಿಳಿಸಿದ್ದಾರೆ.
![]() |
PDO Recruitment 2023 |
ಸಿಲಬಸ್ ಏನಿರುತ್ತದೆ ?
PDO ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ Exam Pattern and Syllabus ಯಾವ ರೀತಿ ಇದೆ ಎಂಬುದನ್ನು ಈ ಕೆಳಗಿನ ಲಿಂಕ್ ಮೇಲೆ ನೀಡಲಾಗಿದ್ದು ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದರೆ PDO ನೇಮಕಾತಿಗೆ ಸಂಬಂಧಪಟ್ಟ syllabus ಸಿಗುತ್ತದೆ.
PDO Study Material
PDO ಮತ್ತು ಪಂಚಾಯತ್ ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಉಚಿತ ಅಧ್ಯಯನ ಸಾಮಗ್ರಿ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ಅಧ್ಯಯನ ಸಾಮಗ್ರಿ ಡೌನ್ಲೋಡ್ ಮಾಡಿಕೊಳ್ಳಬಹುದು.
0 ಕಾಮೆಂಟ್‌ಗಳು