ಆತ್ಮೀಯ ಸ್ಪಧಾ೯ಮಿತ್ರರಿಗೆ ಕನ್ನಡದಲ್ಲಿ ಸಂಪೂಣ೯ ಉದ್ಯೋಗದ ಉಪಯುಕ್ತ ಮಾಹಿತಿ 

34,863 ಖಾಲಿ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕರ್ನಾಟಕ ಸರ್ಕಾರ ಮುಂಬರುವ 34,863 ಖಾಲಿ ಹುದ್ದೆಗಳ ನೇಮಕಾತಿ ಮಾಹಿತಿ

ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 34,863 ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳು ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆಯನ್ನು ನೀಡಿದ್ದಾರೆ. ಸರ್ಕಾರದ ವಿವಿಧ ಇಲಾಖೆಯಲ್ಲಿನ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸುಧಾರಣೆಯನ್ನು ಕೈಗೊಳ್ಳುವ ಕುರಿತು ಮಾನ್ಯ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಸಭೆಯನ್ನು ನಡೆಸಿದ್ದಾರೆ ಹಾಗೂ ನೇಮಕಾತಿ ಪ್ರಾಧಿಕಾರಗಳ ಕಾರ್ಯದರ್ಶಿಯವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗಳು ಮತ್ತು ಕಾಲಮಿತಿ ಒಳಗೆ ಹುದ್ದೆಗಳ ಭರ್ತಿ ಮುಂತಾದ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. 


34,863 ಖಾಲಿ ಹುದ್ದೆಗಳ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
CM Siddaramaiya 


ಯುಪಿಎಸ್ಸಿ ಮಾದರಿಯಲ್ಲಿ ಕೆಪಿಎಸ್ಸಿ ಪರೀಕ್ಷೆ 

ಕೇಂದ್ರ ಲೋಕಸೇವಾ ಆಯೋಗ UPSC ಮುಖ್ಯವಾಗಿ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಯಾವ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರ ಮೂಲಕವಾಗಿ ನೇಮಕಾತಿ ಮಾಡಿಕೊಳ್ಳುತ್ತದೆ ಅದೇ ರೀತಿಯಾಗಿ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ KPSC ರಾಜ್ಯದಲ್ಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರ ಮೂಲಕ ನೇಮಕಾತಿಯನ್ನು ಮಾಡಿಕೊಳ್ಳಬೇಕು ಎಂಬುದನ್ನು ಸೂಚಿಸಿದ್ದಾರೆ. 


ಕೇರಳ ಮಾದರಿಯ ನೇಮಕಾತಿ

ಸರ್ಕಾರದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರದಲ್ಲಿ ಯಾವ ರೀತಿ ನೇಮಕಾತಿ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ ಎಂಬುದನ್ನ ತಿಳಿದುಕೊಳ್ಳಲು ಒಂದು ತಂಡ ಅಲ್ಲಿಗೆ ಭೇಟಿ ನೀಡುವುದರ ಮೂಲಕವಾಗಿ ಅಲ್ಲಿನ ನೇಮಕಾತಿ ವಿಧಾನ ಯಾವ ರೀತಿ ಇದೆ ಎಂಬುದನ್ನು ಅರಿತು ಆ ಮಾದರಿಯನ್ನು ಅನುಸರಿಸಬೇಕು ಎಂಬುದನ್ನ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. 

KEA ಮೂಲಕ ಎಲ್ಲಾ ಗ್ರೂಪ್ C ನೇಮಕಾತಿ 

ವಿವಿಧ ಇಲಾಖೆಯಲ್ಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಕರ್ನಾಟಕ ರಾಜ್ಯ ಲೋಕಸಭಾ ಆಯೋಗದ ಮೂಲಕ ನೇಮಕಾತಿ ನಡೆಸಿದರೆ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ಮೂಲಕ ನೇಮಕಾತಿ ನಡೆಸಲು ಸೂಚನೆಯನ್ನು ನೀಡಲಾಗಿದೆ.

371J ಕಲ್ಯಾಣ ಕರ್ನಾಟಕದ ಮೀಸಲಾತಿ 

ವಿವಿಧ ಇಲಾಖೆಯಲ್ಲಿ ನೇಮಕಾತಿಗಳನ್ನು ಮಾಡಿಕೊಳ್ಳುವಾಗ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ 371J ಮೀಸಲಾತಿ ನಿಯಮಗಳ ಅಡಿಯಲ್ಲಿ 2023 ರಲ್ಲಿ ಹೊರಡಿಸಿದ ಅಧಿಸೂಚನೆಯನ್ನು ನೋಡಿಕೊಳ್ಳಬೇಕು.

PSI ನೇಮಕಾತಿ ವಿಧಾನದಲ್ಲಿ ಹೊಸ ಬದಲಾವಣೆ 

ಇದುವರೆಗೂ ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಮೊದಲು ದೈಹಿಕ ಪರೀಕ್ಷೆಯನ್ನು ನಡೆಸಿ ನಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು ಆದರೆ ಈಗ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರದಲ್ಲಿ ದೈಹಿಕ ಪರೀಕ್ಷೆಯನ್ನು ಕೈಗೊಳ್ಳಬೇಕು ಎಂಬುವುದರ ಬಗ್ಗೆ ಚಿಂತನೆ ನಡಿತಾ ಇದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು

Call Letter Update of Central and State Government Recruitment