ಆತ್ಮೀಯ ಸ್ಪಧಾ೯ಮಿತ್ರರಿಗೆ ಕನ್ನಡದಲ್ಲಿ ಸಂಪೂಣ೯ ಉದ್ಯೋಗದ ಉಪಯುಕ್ತ ಮಾಹಿತಿ 

Karnataka KPSC KAS Prelims Re Exam Date 2024

ಕರ್ನಾಟಕ ಕೆಎಎಸ್ ಪೂರ್ವಭಾವಿ ಪರೀಕ್ಷೆ ಮರು ಪರೀಕ್ಷೆ ದಿನಾಂಕ ಪ್ರಕಟ 


Karnataka KPSC KAS Prelims Re Exam Date 2024
KAS Re Exam 2024


ಸ್ನೇಹಿತರೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ 2024ರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಈಗಾಗಲೇ ಏನು ಒಂದು KAS Prelims ಪರೀಕ್ಷೆಯನ್ನು ನಡೆಸಲಾಗಿತ್ತು ಆ ಪರೀಕ್ಷೆಯಲ್ಲಿ ಸಾಕಷ್ಟು ವ್ಯಾಕರಣ ದೋಷಗಳು ಮತ್ತು ಭಾಷಾಂತರ ದೋಷಗಳು ಕಂಡು ಬಂದಿದ್ದರಿಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಶ್ರೀ ಸಿದ್ದರಾಮಯ್ಯನವರು ಕೆಎಎಸ್ ಮರು ಪರೀಕ್ಷೆ ಮಾಡುವಂತೆ ಸೂಚನೆಯನ್ನು ನೀಡಿದ್ದರು.


ಮಾನ್ಯ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ ಈ ವರ್ಷದ ಅಂತ್ಯದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು ಇದಕ್ಕೆ ಸಂಬಂಧಪಟ್ಟಂತೆ ತಮ್ಮ ಅಧಿಕೃತ ವೆಬ್ಸೈಟ್ನಲ್ಲಿ ದಿನಾಂಕ 29-12-2024 ರಂದು KAS ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಮತ್ತು ಇದೇ ದಿನಾಂಕ ಅಂತಿಮವಾಗಿದೆ ಈ ಪರೀಕ್ಷೆಯ ಜೊತೆಗೆ ಯಾವುದೇ ಪರೀಕ್ಷೆ ಇರುವುದಿಲ್ಲ ಆದ್ದರಿಂದ ಇದೇ ದಿನಾಂಕವನ್ನು ನಿಗದಿ ಮಾಡಲಾಗಿದ್ದು ಇನ್ನು ಮುಂದೆ ಯಾವುದೇ ಪರೀಕ್ಷೆ ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಯಾವುದೇ ಇಲಾಖೆಯ ಪರೀಕ್ಷೆ ಈ ದಿನಾಂಕಕ್ಕೆ ನಿಗದಿ ಮಾಡಿದ್ದಲ್ಲಿ ಯಾವುದೇ ಕಾರಣಕ್ಕೂ 29-12-2024ರ ಈ ಅಂತಿಮ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. 


ಮುಖ್ಯವಾಗಿ ಅಭ್ಯರ್ಥಿಗಳಿಗೆ ಇನ್ನು ಕೂಡ ಕೆಎಎಸ್ Prelims ಪರೀಕ್ಷೆಗೆ ತಯಾರಿ ನಡೆಸಲು ಮೂರು ತಿಂಗಳಿಗಳ ಕಾಲ ಅವಕಾಶ ಸಿಗುವುದರಿಂದ ಇರುವ ಸಮಯವನ್ನು ಸದುಪಯೋಗ ಮಾಡಿಕೊಳ್ಳಬೇಕು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು

Call Letter Update of Central and State Government Recruitment