KPTCL New Recruitment Update 2024.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ KPTCL ಒಟ್ಟು 2975 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಈ ಒಂದು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಬೆಸ್ಕಾಂ, ಮೆಸ್ಕಾಂ ಸೇರಿದಂತೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
![]() |
| KPTCL Recruitment 2024 |
ವಿದ್ಯಾರ್ಹತೆ
ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ / SSLC ಪಾಸಾಗಿರಬೇಕು.
ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಓದುವ ಮತ್ತು ಬರೆಯುವ ಜ್ಞಾನ ಇರಬೇಕು.
ಹುದ್ದೆಗಳ ವಿವರ
ಕಿರಿಯ ಪವರ್ ಮ್ಯಾನ್ / ಸ್ಟೇಷನ್ ಪರಿಚಾರಕ
ಒಟ್ಟು ಹುದ್ದೆ: 2975
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 21 ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 20 2024
ಅರ್ಜಿ ಶುಲ್ಕದ ವಿವರಗಳು
ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಪ್ರವರ್ಗ 1, 2A, 2B, 3A, 3Bಗೆ ಸೇರಿದ ಅಭ್ಯರ್ಥಿಗಳಿಗೆ 614 ರೂಪಾಯಿ (GST+Postal Charge)
SC/ST ಅಭ್ಯರ್ಥಿಗಳಿಗೆ : 378 ರೂಪಾಯಿ (GST+Postal Charge)
ಅರ್ಜಿ ಶುಲ್ಕವನ್ನು ಅಂಚೆ ಕಚೇರಿಯ ಚಲನ್ ಮೂಲಕ ಪಾವತಿ ಮಾಡಬಹುದು.
ಅಭ್ಯರ್ಥಿಗಳಿಗೆ ಆನ್ಲೈನ್ ಹೊರತುಪಡಿಸಿ ಯಾವುದೇ ಮೂಲಗಳಿಂದ ಅರ್ಜಿ ಸಲ್ಲಿಸುವ ಅವಕಾಶ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಮುಖ ಸೂಚನೆಗಳು
- ಕಿರಿಯ ಪವರ್ ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು KPTCL or ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
- ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಕೆಪಿಟಿಸಿಎಲ್ ಗೆ ಮಾತ್ರ ಅರ್ಜಿ ಸಲ್ಲಿಸಬೇಕು.
- ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ಮಾಡುವುದಿಲ್ಲ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಕೇವಲ ಒಂದು ಅರ್ಜಿ ಮಾತ್ರ ಪರಿಗಣಿಸಲಾಗುತ್ತದೆ.
- ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಮಿಕ್ಕುಳಿದ ವರ್ಗಕ್ಕೆ ಅರ್ಜಿ ಸಲ್ಲಿಸಬೇಕಾದರೆ ಪ್ರತ್ಯೇಕ ಅರ್ಜಿ ಶುಲ್ಕ ಪಾವತಿ ಮಾಡುವುದರ ಮೂಲಕ ಸಲ್ಲಿಸಬಹುದು.
ನೇಮಕಾತಿ ವಿಧಾನ
ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲ
SSLC Merit ಆಧಾರದ ಮೇಲೆ 1:5 Physical and Document Verification ನಂತರ ಅಂತಿಮ ನೇಮಕಾತಿ

0 ಕಾಮೆಂಟ್‌ಗಳು