India Post GDS Recruitment 2025
ಭಾರತೀಯ ಅಂಚೆ ಇಲಾಖೆಯಲ್ಲಿ ಗ್ರಾಮೀಣ ಡಾಕ್ ಸೇವಕ, BPM (Branch Post Master) and ABPM ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಮುಖ್ಯವಾಗಿ ಕರ್ನಾಟಕಕ್ಕೆ 1135 ಹುದ್ದೆಗಳು ಖಾಲಿಯಿದ್ದು ಭಾರತದಾದ್ಯಂತ ಯಾವುದೇ ರಾಜ್ಯಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ.
![]() |
India Post GDS Recruitment 2025 |
ಭಾರತೀಯ ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಲು ಬಯಸುವ 10ನೇ ತರಗತಿಯನ್ನು ಪೂರೈಸಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ಇರುವುದಿಲ್ಲ ಕೇವಲ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.
ಒಟ್ಟು ಹುದ್ದೆಗಳ ಸಂಖ್ಯೆ
ಭಾರತದಲ್ಲಿ ಒಟ್ಟು 21,413 ಹುದ್ದೆಗಳಿದ್ದು. ಕರ್ನಾಟಕದಲ್ಲಿ 1,135 ಹುದ್ದೆಗಳು ಖಾಲಿ ಇವೆ ವಿವಿಧ ಮೀಸಲಾತಿಯನ್ನು ಕೋರಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ
ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸಾಗಿರಬೇಕು / SSLC ವಿದ್ಯಾರ್ಹತೆ (ಮೆಟ್ರಿಕ್ಯುಲೇಷನ್) ಜೊತೆಗೆ ಅಭ್ಯರ್ಥಿಗೂ ತಾವು ಯಾವ ರಾಜ್ಯಕ್ಕೆ ಅರ್ಜಿಯನ್ನು ಸಲ್ಲಿಸುತ್ತೀರಿ ಆ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲವರಾಗಿರಬೇಕು. ಉದಾಹರಣೆಗೆ : ನೀವು ಕರ್ನಾಟಕದಲ್ಲಿ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ಕನ್ನಡ ಭಾಷೆ, ಮಹಾರಾಷ್ಟ್ರಕ್ಕೆ ಅರ್ಜಿಯನ್ನು ಸಲ್ಲಿಸುತ್ತಿದ್ದರೆ ಮರಾಠಿ ಭಾಷೆ, ಹೀಗೆ ನೀವು ಯಾವ ರಾಜ್ಯಕ್ಕೆ ಅರ್ಜಿ ಸಲ್ಲಿಸುತ್ತೀರಿ ಆ ರಾಜ್ಯದ ಭಾಷೆ ನಿಮಗೆ ತಿಳಿದಿರಬೇಕು.
ವಯೋಮಿತಿ
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ಇದೆ ಅಂದರೆ 45 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಅಂದರೆ 43 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ ವಿವರ
100 ರೂಪಾಯಿ ಅರ್ಜಿ ಶುಲ್ಕವನ್ನು ಎಲ್ಲಾ ಸಾಮಾನ್ಯ ವರ್ಗದ, OBC, EWS ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಮತ್ತು ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
India Post Salary Details
12,000 to 29,400 with Allowances
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 10-02-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-03-2025
ಅರ್ಜಿ ತಿದ್ದುಪಡಿ ಮಾಡುವ ದಿನಾಂಕ : 6 to 8th of March 2025
Selection Process
- ಯಾವುದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆ ಇರುವುದಿಲ್ಲ
- ಅಭ್ಯರ್ಥಿಗಳು ತಾವು 10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
- ಮೊದಲಿಗೆ ಅಭ್ಯರ್ಥಿಗಳು ತಾವು 10ನೇ ತರಗತಿ ಪಡೆದ ಅಂಕಗಳ ಆಧಾರದ ಮೇಲೆ ದಾಖಲಾತಿ ಪರಿಶೀಲನೆಗೆ (Document Verification) ಕರೆಯುವುದರ ಮೂಲಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
0 ಕಾಮೆಂಟ್‌ಗಳು